ಬಸವಣ್ಣನವರ ಜೀವನ ಚರಿತ್ರೆ ಕನ್ನಡ | Biography of Basavanna in Kannada

ಬಸವಣ್ಣನವರ ಜೀವನ ಚರಿತ್ರೆ ಕನ್ನಡ Basavanna Jeevana Charitre Biography information in Kannada

ಬಸವಣ್ಣನವರ ಜೀವನ ಚರಿತ್ರೆ ಕನ್ನಡ

Biography of Basavanna in Kannada
ಬಸವಣ್ಣನವರ ಜೀವನ ಚರಿತ್ರೆ ಕನ್ನಡ

ಬಸವಣ್ಣ

ಬಸವಣ್ಣನವರು ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣನ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣನವರು ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ಇವುಗಳನ್ನು ನಿರಾಕರಿಸಿದರು. ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು ಹೇಳಿದರು ಇದನ್ನು ಎಲ್ಲರು ಧರಿಸಿ ಪೂಜಿಸಬಹುದು. ತನ್ನ ಸಾಮ್ರಾಜ್ಯದ ಮುಖ್ಯಮಂತ್ರಿಯಾಗಿ, ಅವರು “ಅನುಭವ ಮಂಟಪ” ಅಥವಾ “ಆಧ್ಯಾತ್ಮಿಕ ಅನುಭವದ ಭವನ” ಇಲ್ಲಿ ಎಲ್ಲಾ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ಪುರುಷ ಮತ್ತು ಮಹಿಳೆಯರು ಆಧ್ಯಾತ್ಮಿಕ ಮತ್ತು ಪ್ರಾಪಂಚಿಕ ಪ್ರಶ್ನೆಗಳನ್ನು ಮುಕ್ತವಾಗಿ ಚರ್ಚಿಸಲು ಸ್ವಾಗತಿಸಿತು.

ಬಸವಣ್ಣನವರ ಆರಂಭಿಕ ಜೀವನ

ಬಸವಣ್ಣನವರು ೧೧೩೪ ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ. ಮಾದರಸ ಮತ್ತು ಮಾದಲಾಂಬೆ ಬಸವಣ್ಣನವರ ತಂದೆತಾಯಿಗಳು. ಮಾದರಸ ಬಾಗೇವಾಡಿ ಪಟ್ಟಣ ಅಧ್ಯಕ್ಷರಾಗಿದ್ದರು. ಅವರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು. ಕಮ್ಮೆ ಬ್ರಾಹ್ಮಣರನ್ನು ಆರಾಧ್ಯರು ಮತ್ತು ಸ್ಮಾರ್ತ ಬ್ರಾಹ್ಮಣರು ಎಂದೂ ಕರೆಯುತ್ತಾರೆ. ಅವರು ಅರ್ಧ ಬ್ರಾಹ್ಮಣರು ಮತ್ತು ಅರ್ಧ ವೀರಶೈವರು. ಬಸವಣ್ಣ ಹುಟ್ಟಿದ್ದು ವೀರಶೈವ ಬ್ರಾಹ್ಮಣ ಕುಟುಂಬದಲ್ಲಿ ಎಂಬುದು ಖಚಿತ. ವೀರಶೈವ ಬ್ರಾಹ್ಮಣರು ವೈಯಕ್ತಿಕ ಲಿಂಗವನ್ನು ಪೂಜಿಸುತ್ತಾರೆ ಆದರೆ ಅವರು ತಮ್ಮ ವ್ಯಕ್ತಿಯ ಮೇಲೆ ಲಿಂಗವನ್ನು ಧರಿಸುವುದಿಲ್ಲ ಆದರೆ ತಮ್ಮ ಲಿಂಗವನ್ನು ಪೂಜಾ ಕೋಣೆಯಲ್ಲಿ ಇರಿಸುತ್ತಾರೆ. ಮಾದರ ಮತ್ತು ಮಾದಲಾಂಬೆ ವೀರಶೈವ-ಬ್ರಾಹ್ಮಣ ಸಮುದಾಯದವರು.

ಧಾರ್ಮಿಕ ಮತ್ತು ಸಾಮಾನತೆಯ ಬೆಳವಣಿಗೆ

  • ಬಸವೇಶ್ವರರು ಹನ್ನೆರಡು ವರ್ಷಗಳ ಕಾಲ ಕೂಡಲ ಸಂಗಮದಲ್ಲಿ ಅಧ್ಯಯನ ಮಾಡುತ್ತಾ ಕಳೆದರು. ಅವರ ದೃಷ್ಟಿಯಲ್ಲಿ ದೇವನು ಒಬ್ಬ ಮತ್ತು ಅವನು ಮಾನವನಲ್ಲಿದ್ದಾನೆಯೇ ಹೊರತು ಗುಡಿ-ಗುಂಡಾರಗಳಲ್ಲಿ ಅಲ್ಲ. ಕೆಲಸ ಮಾಡಿ ಜೀವನ ನಡೆಸಬೇಕು, ಆಲಸಿ ಜೀವನ ಸಲ್ಲ. ಸುಳ್ಳು ಹೇಳುವುದು, ವಂಚಿಸುವುದು, ಕೊಲೆ-ಸುಲಿಗೆ ಮಾಡುವುದು, ಪ್ರಾಣಿಬಲಿ ನೀಡುವುದು, ಪರಧನ ಹರಣ, ಪರಸ್ತ್ರೀ ವ್ಯಾಮೋಹ ಹೊಂದುವುದು ಘೋರ ಅಪರಾಧ. ಕೆಲಸದಲ್ಲಿ ಮೇಲು ಅಥವಾ ಕೀಳು ಎಂಬುದಿಲ್ಲ. ಪುರುಷನಂತೆ ಮಹಿಳೆಗೂ ವಿದ್ಯಾಭ್ಯಾಸದ ಮತ್ತು ತನ್ನ ಜೀವನವನ್ನು ರೂಪಿಸಿಕೊಳ್ಳುವ ಹಕ್ಕಿದೆ. ಹೀಗೆ ಸಮಾನತೆ, ಕಾಯಕ, ದಾಸೋಹ ತತ್ವಗಳನ್ನು ಸ್ವೀಕರಿಸುವ ಮತ್ತು ಆಚರಿಸುವ ಯಾರು ಬೇಕಾದರೂ ಶಿವಶರಣರಾಗ ಬಹುದು ಎಂದು ಬಸವಣ್ಣವರು ಸಾರಿದರು. ಪೊಳ್ಳು ದೇವರುಗಳನ್ನು ಸ್ತುತಿಸುತ್ತಿದ್ದ ಮತ್ತು ಪುರೋಹಿತಶಾಹಿಯಿಂದ ನಿರಂತರವಾಗಿ ವಂಚನೆಗೊಳಗಾಗುತ್ತಿದ್ದ ಜನತೆಗೆ ಬಸವಣ್ಣನವರು ಹೊಸ ಜೀವನ ನೀಡಿದರು.
  • ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು. ಬಸವಣ್ಣನವರನ್ನು ಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ ಎಂದೂ ಕರೆಯಲಾಗುತ್ತದೆ. ಬಸವಣ್ಣನವರ ಪ್ರೇರಣೆಯಿಂದ ಹರಿಜನ ಮತ್ತು ಬ್ರಾಹ್ಮಣ ಕುಟುಂಬಗಳ ನಡುವೆ ನಡೆದ ಅನುಲೋಮ ವಿವಾಹ ಕಲ್ಯಾಣದ ಕ್ರಾಂತಿಗೆ ಮುನ್ನುಡಿಯಾಯಿತು. ಇವರು ಷಟ್ ಸ್ಥಲ ವಚನ, ಕಾಲಜ್ಞಾನ ವಚನ, ಮಂತ್ರಗೋಪ್ಯ, ಶಿಖಾರತ್ನ ವಚನ ಎಂಬ ಗ್ರಂಥಗಳನ್ನು ಬರೆದಿದ್ದಾರೆ. ಇವರನ್ನು ಕುರಿತಂತೆ ಕನ್ನಡ, ತೆಲುಗು, ಸಂಸ್ಕೃತ, ತಮಿಳು, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಪುರಾಣಗಳು ರಚನೆಯಾಗಿವೆ. ಬಾಗೇವಾಡಿ ಕಪ್ಪಡಿಸಂಗಮ, ಕಲ್ಯಾಣ ಪಟ್ಟಣಗಳಲ್ಲಿ ಇವರ ಸ್ಮಾರಕಗಳಿವೆ.
  • ಶೂದ್ರರಾದ ರೈತಾಪಿ ಜನರು, ಕಾಯಕಜೀವಿಗಳು, ಮಹಿಳೆಯರು ಮತ್ತು ಪಂಚಮರು ಈ ದೇಶದಲ್ಲಿ ಸಹಸ್ರಾರು ವರ್ಷಗಳಿಂದ ಮನುಧರ್ಮದ ಪುರುಷ ಪ್ರಧಾನವಾದ ವರ್ಣ ವ್ಯವಸ್ಥೆಯಿಂದಾಗಿ ಪಡಬಾರದ ಕಷ್ಟಪಟ್ಟಿದ್ದಾರೆ. ಮೇಲ್ವರ್ಗ ಮತ್ತು ಮೇಲ್ಜಾತಿಯ ಅನುತ್ಪಾದಕ ಪುರುಷರಿಗಾಗಿಯೇ ಬದುಕಿನ ಎಲ್ಲ ಸುಖಭೋಗಗಳು ಮೀಸಲಾಗಿದ್ದವು. ಇವರು ಮಾತ್ರ ಜನಿವಾರ ಧರಿಸುವ ಹಕ್ಕನ್ನು ಪಡೆದಿದ್ದರು.
  • ಜನಿವಾರ ಧರಿಸುವ ಬ್ರಾಹಣ ಓದಿರಬಹುದು, ಬರೆದಿರಬಹುದು ಆದರೆ ಕಾಯಕಜೀವಿಯಾಗಿ ಉತ್ಪಾದನೆಯಲ್ಲಿ ತೊಡಗಿಲ್ಲ. ಉತ್ಪಾದನೆಯ ಅನುಭವದಿಂದ ಬರುವ ಜ್ಞಾನವನ್ನು ಹಿಂದಿನ ಕಾಲದಲ್ಲಿ ಅವನೆಂದೂ ಪಡೆಯಲಿಲ್ಲ. ಕ್ಷತ್ರಿಯ ನಾಗಿರಬಹುದು ಆದರೆ ಉತ್ಪಾದನೆಯಲ್ಲಿ ತೊಡಗಲಿಲ್ಲ. ವೈಶ್ಯ ವಸ್ತುಗಳ ಮಾರಾಟ ಮಾಡಿರಬಹುದು, ಕೃಷಿಭೂಮಿಯ ಒಡೆಯನೂ ಆಗಿರಬಹುದು ಆದರೆ ಸ್ವತಃ ಉತ್ಪಾದನೆ ಮಾಡಲಿಲ್ಲ. ಈ ಮೂರೂ ವರ್ಣದವರಿಗೂ ಜನಿವಾರ ಇದೆ.
  • ಆದರೆ ಉತ್ಪಾದನೆಯಲ್ಲಿ ತೊಡಗಿದ ಕಾಯಕ ಜೀವಿಗಳಿಗೆ ಮತ್ತು ಪಂಚಮರಿಗೆ ಜನಿವಾರ ಇಲ್ಲ. ಯಾರಿಗೆ ಜನಿವಾರ ಇತ್ತೋ ಅವರು ದುಡಿಯದೆ ಸುಖ ಜೀವನವನ್ನು ಅನುಭವಿಸಿದರು. ಯಾರಿಗೆ ಜನಿವಾರ ಇದ್ದಿದ್ದಿಲ್ಲವೂ ಅವರು ದುಡಿದೂ ಕಷ್ಟ ಜೀವನವನ್ನು ಅನುಭವಿಸಿದರು. ಅಂತೆಯೆ ಬಸವಣ್ಣನವರು ಕಟ್ಟ ಕಡೆಗೆ ಮನುಷ್ಯನ ಕಡೆಗೆ ಬಂದರು ಈ ಅನ್ಯಾಯದ ವಿರುದ್ಧ ಸಿಡಿದೆದ್ದರು.
  • “ಜಾತಿ ಸಂಕರವಾದ ಬಳಿಕ ಕುಲವನರಸುವರೆ ?” ಎಂದು ಪ್ರಶ್ನಿಸಿ ಕಾಯಕಜೀವಿಗಳ ಕೇಂದ್ರಿತ ಶರಣ ಸಂಕುಲವನ್ನು ಸೃಷ್ಟಿಸಿದರು. ವಿವಿಧ ಕಾಯಕಗಳ ಶೂದ್ರರಿಗೆ, ಮಹಿಳೆಯರಿಗೆ ಮತ್ತು ಪಂಚಮರಿಗೆ ಮೊದಲ ಬಾರಿಗೆ ಶಿಕ್ಷಣ ನೀಡುವ ವ್ಯವಸ್ಥೆ ಮಾಡಿದರು. ಅವರೆಲ್ಲ ಅನುಭವ ಮಂಟಪದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು.
  • ಭಾರತದಲ್ಲಿ ವಿವಿಧ ಜಾತಿಗಳ ಕಾಯಕಜೀವಿಗಳು ಮೊದಲ ಬಾರಿಗೆ ಜಾತಿಯನ್ನು ಮೀರಿ ಒಂದು ವರ್ಗವಾಗಿದ್ದು ಶರಣ ಸಂಕುಲದಲ್ಲಿ ಎಂಬುದು ಹೆಮ್ಮೆಯ ವಿಚಾರವಾಗಿದೆ. ಅವರೆಲ್ಲ ತಮ್ಮ ಕಾಯಕಗಳ ಹೆಸರುಗಳನ್ನು ಅಭಿಮಾನದಿಂದ ಉಳಿಸಿಕೊಂಡರು. ಆದರೆ ಆ ಕಾಯಕಗಳ ಒಳಗೆ ಇದ್ದ ಜಾತಿ ವಿಷವನ್ನು ಹೊರ ಹಾಕಿದರು. ಹೀಗೆ ಶರಣರಲ್ಲಿ ಸಮಗಾರ, ಮಾದಾರ, ಮೇದಾರ, ಡೋಹರ, ಅಂಬಿಗ ಮುಂತಾದ ಪದಗಳು ಜಾತಿ ಸೂತಕವನ್ನು ಕಳೆದುಕೊಂಡು ಕಾಯಕ ಸೂಚಕಗಳಾಗಿ ಉಳಿದವು.

ಅನುಭವ ಮಂಟಪ

ಬಸವಣ್ಣನವರು ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆ ತಂದು ‘ಅನುಭವ ಮಂಟಪ‘ವನ್ನು ಸ್ಥಾಪಿಸಿದರು. ಅನುಭವ ಮಂಟಪ ೧೨ನೇ ಶತಮಾನದಲ್ಲಿ ಎಲ್ಲಾ ಧರ್ಮದ ಶರಣರು, ಕವಿಗಳು ಮತ್ತು ತತ್ವಜ್ಞಾನಿಗಳು ಸೇರುತ್ತಿದ್ದ ಒಂದು ಸಾಮಾಜಿಕ-ಧಾರ್ಮಿಕ ಸಂಸತ್ತು. ಇದರಲ್ಲಿ ಎಲ್ಲಾ ಜಾತಿಯ ಎಲ್ಲಾ ವೃತ್ತಿಯ ಸಾಮಾನ್ಯ ಜನರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಚರ್ಚಿಸುತ್ತಿದ್ದರು ಹಾಗೂ ತಮ್ಮ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದರು. ಅನುಭವ ಮಂಟಪದ ಪ್ರಥಮ ಅಧ್ಯಕ್ಷರಾಗಿದ್ದವರು ಅಲ್ಲಮ ಪ್ರಭುಗಳು. ಅಕ್ಕಮಹಾದೇವಿ ಅನುಭವ ಮಂಟಪಕ್ಕೆ ಬಂದಾಗ ಅಲ್ಲಮ ಪ್ರಭು ಅವಳ ಜೊತೆ ಸಂವಾದ ನಡೆಸಿದರು, ಮೊಳಿಗೆ ಮಾರಯ್ಯ ಕಾಶ್ಮೀರದ ಮಹಾರಾಜ ಅವರು ಕಲ್ಯಾಣದ ಅನುಭವ ಮಂಟಪದ ಸಮಾನತೆ ಮತ್ತು ಧಾರ್ಮಿಕ ಆಚರಣೆಗಳನ್ನು ಕಂಡು ಮನಸೋತು ಕಲ್ಯಾಣದಲ್ಲಿಯ ಕಟ್ಟಿಗೆ ಮಾರುವ ಕಾಯಕ ಕೈಗೊಂಡರು. ವಿವಿಧ ಜಾತಿ, ಕಾಯಕದವರು ಅನುಭವ ಮಂಟಪದ ಸದಸ್ಯರಾಗಿದ್ದರು. ಒಮ್ಮೆ ಅನುಭವ ಮಂಟಪದಲ್ಲಿ ಚರ್ಚೆ ನಡೆಯುತ್ತಿರುವಾಗ ಮಹಾದೇವಿಯ ಆಗಮನವಾಗುತ್ತದೆ ಆಗ ಮಡಿವಾಳ ಮಾಚಿದೇವರು ಎದ್ದು ನಿಂತು ಬುದ್ಡಿ ಉಡುತಡಿಯ ಮಹಾದೇವಿಯವರು ಆಗಮಿಸುತ್ತಿದ್ದಾರೆ ಎಂದು ಹೇಳುತ್ತಾರೆ.

ವಚನಗಾರ ಬಸವಣ್ಣ

ಬಸವಣ್ಣ ತಮ್ಮ ವಚನಗಳ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ, ಅಯ್ಯ ಎಂದರೆ ಸ್ವರ್ಗ ಎಲವೂ ಎಂದರೆ ನರಕ ಎಂದು ಸಾರುವ ಮೂಲಕ ತಮ್ಮ ಮಾನವಾತಾ ವಾದಕ್ಕೆ ಸಾಹಿತ್ಯದ ಸ್ಪರ್ಶ ನೀಡಿದರು. ಕನ್ನಡ ಸಾಹಿತ್ಯಕ್ಕೆ ವಚನಗಳ ಮೂಲಕ ಅಪೂರ್ವ ಕೊಡುಗೆ ಅಪಾರ ಇದುವರೆಗೆ ಸುಮಾರು 1500 ವಚನಗಳನ್ನು ಸಂಗ್ರಹಿಸಿಡಲಾಗಿದೆ.

ಬಸವಣ್ಣನವರ ವಚನಗಳು :

“ಮಾನವ ಜನ್ಮ ದೊಡ್ಡದಲ್ಲಾ, ಮಾನವೀಯತೆ ದೊಡ್ಡದು. ಧರ್ಮ ದೊಡ್ಡದಲ್ಲಾ,, ದಯೆ ದೊಡ್ಡದು.”

“ಎನಗಿಂತ ಕಿರಿಯರಿಲ್ಲ, ಶಿವಭಕ್ತರಿಗಿಂತ ಹಿರಿಯರಿಲ್ಲ. ನಿಮ್ಮ ಪಾದಸಾಕ್ಷಿ ಎನ್ನ ಮನಸಾಕ್ಷಿ ಕೂಡಲಸಂಗಮದೇವ ಎನಗಿದೆ ದಿವ್ಯ..”

“ಜ್ಞಾನದಿಂದ ಅಧಿಕಾರ ಸಿಬಹುದು,ಆದರೆ ಗೌರವ ಸಿಗಬೇಕೆಂದರೆ ವ್ಯಕ್ತಿತ್ವ ಇರಲೇ ಬೇಕು.”

“ಇವನಾರವ ಇವನಾರವ ಇವನಾರವ ನೆಂದೆನಿಸದಿರಯ್ಯಾ
ಇವ ನಮ್ಮವ ಇವ ನಮ್ಮವ ಇವ ನಮ್ಮವ ನೆಂದೆನಿಸಯ್ಯಾ
ಕೂಡಲಸಂಗಮದೇವಾ ನಿಮ್ಮ ಮಹಾಮನೆಯ ಮಗನೆಂದೆನಿಸಯ್ಯ”.

FAQ

ಬಸವಣ್ಣನವರು ಎಲ್ಲಿ ಜನಿಸಿದರು ?

ಬಸವನ ಬಾಗೆವಾಡಿಯಲ್ಲಿ ಜನಿಸಿದರು.

ಅನುಭವ ಮಂಟಪವನ್ನು ಯಾರು ಸ್ಥಾಪಿಸಿದರು ?

ಬಸವಣ್ಣನವರು

ಇತರೆ ವಿಷಯಗಳು :

ಸುಭಾಷ್ ಚಂದ್ರ ಬೋಸ್ ಅವರ ಬಗ್ಗೆ ಪ್ರಬಂಧ

ಕಾಲೇಜು ದಿನಗಳ ಪ್ರಬಂಧ

Leave a Comment