ಶಿವರಾಮ ಕಾರಂತ ಜೀವನ ಚರಿತ್ರೆ| Biography of Shivaram Karanta in Kannada

ಶಿವರಾಮ ಕಾರಂತ ಜೀವನ ಚರಿತ್ರೆ Biography of Shivaram Karanta jeevana Charitre information in Kannada

ಶಿವರಾಮ ಕಾರಂತ ಜೀವನ ಚರಿತ್ರೆ

Biography of Shivaram Karanta in Kannada
ಶಿವರಾಮ ಕಾರಂತ ಜೀವನ ಚರಿತ್ರೆ

ಶಿವರಾಮ ಕಾರಂತರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಮ್ಮ Post ನಲ್ಲಿ ನೀಡಲಾಗಿದೆ.

ಶಿವರಾಮ ಕಾರಂತರು

“ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಪ್ರಸಿದ್ದರಾಗಿದ್ದಾರೆ. ರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.

ಬಾಲ್ಯ ಜೀವನ

ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ ರಂದು ಜನಿಸಿದರು. ಇವರ ತಂದೆ ಶೇಷ ಕಾರಂತ ಮತ್ತು ತಾಯಿ ಲಕ್ಷ್ಮಮ್ಮ ಇವರ ಐದನೇ ಮಗುವಾಗಿ ಕಾರಂತರು ಜನಿಸಿದರು.

ಶಿವರಾಮ ಕಾರಂತರ ಶಿಕ್ಷಣ

ಕುಂದಾಪುರದ ಶಾಲೆಯಲ್ಲಿ 1920 ರಲ್ಲಿ ಶಿವರಾಮ ಕಾರಂತರು ತಮ್ಮ ಎಸ್.ಎಸ್.ಎಲ್.ಸಿ ಪರೀಕ್ಶೆಯನ್ನು ಬರೆದು ಮುಗಿಸಿದರು. ತಮ್ಮ ಶಾಲೆಯಲ್ಲಿ ರಂಗರಾಯರು ಕಾರಂತರ ಮೊದಲ ಗುರುಗಳಾಗಿ ಕಾರಂತರಿಗೆ ಬೆಂಬಲ ನೀಡಿದರು. ಮುದ್ದಣ ಕವಿಯ ಗುರುವಾಗಿದ್ದ ಮಳಲಿ ಸುಬ್ಬರಾಯರು ಸಹ ಶಿವರಾಮ ಕಾರಂತರಿಗೆ ಗುರುವಾಗಿದ್ದರು. ಮಳಲಿ ಸುಬ್ಬರಾಯರು ಮೂಲತ: ಯಕ್ಷಗಾನ ರಚನೆ ಮಾಡಬಲ್ಲವರಾಗಿದ್ದು ಯಕ್ಷಗಾನದ ಬಗ್ಗೆ ಶಿವರಾಮರಿಗೆ ಆಸಕ್ತಿ ಮೂಡಲು ಮುಖ್ಯ ಕಾರಣರಾದರು. ಶಿವರಾಮ ಕಾರಂತರಿಗೆ ಪರಿಸರವೆಂದರೆ ಬಹಳ ಪ್ರೀತಿ. ಅವರು ಬಾಲ್ಯದಲ್ಲಿ ಕೆರೆಗಳನ್ನು ಏರಿ,ಸಮುದ್ರತೀರ,ಮರದ ನೆರಳಿನ ಪ್ರದೇಶಗಳಲ್ಲಿ ಸಮಯವನ್ನು ಕಳೆಯುತ್ತಿದ್ದರು. ಆಧುನಿಕ ವಿದ್ಯಾಭ್ಯಾಸ ಕೇವಲ ಹೊಟ್ಟೆಪಾಡಿಗಾಗಿ ಎನ್ನುವುದು ಅವರ ಅಭಿಪ್ರಾಯ. ನಿಜವಾದ ವ್ಯಕ್ತಿತ್ವದ ವಿಕಸನವಾದರೆ ಅದೇ ನಿಜವಾದ ಶಿಕ್ಷಣವೆನ್ನುವುದು ಅವರ ಅಭಿಪ್ರಾಯವಾಗಿತ್ತು.

ಸಾಹಿತಿಯಾಗಿ ಕಾರಂತರು

ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ ಕಮ್ಮಿಯಾಗಿ ಬಾಳಿ, ತಮ್ಮ ಜೀವಿತಾವಧಿಯಲ್ಲಿ ಸುಮಾರು ೪೨೭ ಪುಸ್ತಕಗಳನ್ನು ರಚಿಸಿದರು. ಅವುಗಳಲ್ಲಿ ಕಾದಂಬರಿಗಳು ೪೭. ತಮ್ಮ ೯೬ನೆಯ ವಯಸ್ಸಿನಲ್ಲೂ ಹಕ್ಕಿಗಳ ಕುರಿತು ಒಂದು ಪುಸ್ತಕವನ್ನು ಬರೆದಿದ್ದು, ಇದು ವಿಶ್ವ ದಾಖಲೆಗೆ ಅರ್ಹವಾಗಿರುವ ಒಂದು ಸಾಧನೆ ಎನ್ನಬಹುದು. ಸಾಹಿತಿಯಾಗಿ ಶಿವರಾಮ ಕಾರಂತರು ಪ್ರಸಿದ್ಧಿಯಾಗಿರುವಂತೆ, ಇತರ ಕ್ಷೇತ್ರಗಳಲ್ಲೂ ಅಪಾರ ಸಾಧನೆ ಮಾಡಿದವರು. ಕರ್ನಾಟಕದ ಪ್ರಮುಖ ಕಲೆಯಾದ ಯಕ್ಷಗಾನದ ಉಳಿವಿಗೆ ಪ್ರಯತ್ನಿಸಿ, ಅದರಲ್ಲಿ ಹಲವು ಪ್ರಯೋಗಗಳನ್ನು ಮಾಡಿದ್ದರು. ತಾವೇ ಸ್ವತಃ ನೃತ್ಯವನ್ನು ಕಲಿತು, ಬ್ಯಾಲೆಯಲ್ಲೂ ಗಂಭೀರ ಪ್ರಯೋಗ ಮತ್ತು ಪ್ರಯತ್ನ ಮಾಡಿದ್ದರು.

  • ಕವನ ಸಂಕಲನಗಳು : ರಾಷ್ಟ್ರಗೀತ ಸುಧಾಕರ, ಸೀಳ್ಗವನಗಳು
  • ಕಾದಂಬರಿಗಳು : ಅದೇ ಊರು, ಅದೆ ಮರ, ಅಳಿದ ಮೇಲೆ, ಅಂಟಿದ ಅಪರಂಜಿ, ಆಳ ನಿರಾಳ, ಇದ್ದರೂ ಚಿಂತೆ, ಇನ್ನು ಮುಂತಾದವುಗಳು.
  • ಚಲನಚಿತ್ರವಾಗಿರುವ ಕಾದಂಬರಿಗಳು :
    * ಕುಡಿಯರ ಕೂಸು
    * ಚಿಗುರಿದ ಕನಸು
    * ಚೋಮನ ದುಡಿ
    * ಬೆಟ್ಟದ ಜೀವ
    * ಮೂಕಜ್ಜಿಯ ಕನಸುಗಳುಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ.
  • ನಾಟಕಗಳು : ಅವಳಿ ನಾಟಕಗಳು, ಏಕಾಂಕ ನಾಟಕಗಳು, ಐದು ನಾಟಕಗಳು, ಕಟ್ಟೆಪುರಾಣ, ಕಠಾರಿ ಭೈರವ, ಇನ್ನು ಮುಂತಾದವುಗಳು.

ಪರಿಸರ ಪ್ರೇಮಿಯಾಗಿದ್ದ ಕಾರಂತರು

ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ “ಕಾರಂತಜ್ಜ” ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾ ಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.

FAQ

ಶಿವರಾಮ ಕಾರಂತರು ಎಲ್ಲಿ ಜನಿಸಿದರು ?

ಉಡುಪಿ ಜಿಲ್ಲೆಯ ಕೋಟದಲ್ಲಿ ಜನಿಸಿದರು.

ಶಿವರಾಮ ಕಾರಂತರು ಎಷ್ಟರಲ್ಲಿ ಜನಿಸಿದರು ?

೧೯೦೨, ಅಕ್ಟೋಬರ್ ೧೦

ʼಮೂಕಜ್ಜಿಯ ಕನಸುʼ ಇದು ಯಾರ ಕಾದಂಬರಿ ಯಾಗಿದೆ?

ಶಿವರಾಮ ಕಾರಂತರು

ʼನಡೆದಾಡುವ ವಿಶ್ವಕೋಶʼವೆಂದು ಯಾರನ್ನು ಕರೆಯುತ್ತಾರೆ ?

ಶಿವರಾಮ ಕಾರಂತರನ್ನು ನಡೆದಾಡುವ ವಿಶ್ವಕೋಶ ಎಂದು ಕರೆಯುತ್ತಾರೆ.

ಇತರೆ ವಿಷಯಗಳು :

ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಬಗ್ಗೆ ಪ್ರಬಂಧ

ಬಾಲಗಂಗಾಧರ ತಿಲಕ್ ಜೀವನ ಚರಿತ್ರೆ

Leave a Comment