ಸರ್ ಎಂ ವಿಶ್ವೇಶ್ವರಯ್ಯ ನವರ ಜೀವನ ಚರಿತ್ರೆ | Biography of Sir M Visvesvaraya in Kannada

ಸರ್ ಎಂ ವಿಶ್ವೇಶ್ವರಯ್ಯ ನವರ ಜೀವನ ಚರಿತ್ರೆ Biography of Sir M Visvesvaraya information Jeevana Charitra in Kannada

ಸರ್ ಎಂ ವಿಶ್ವೇಶ್ವರಯ್ಯ ನವರ ಜೀವನ ಚರಿತ್ರೆ

Biography of Sir M Visvesvaraya in Kannada
ಸರ್ ಎಂ ವಿಶ್ವೇಶ್ವರಯ್ಯ ನವರ ಜೀವನ ಚರಿತ್ರೆ | Biography of Sir M Visvesvaraya in Kannada

ಸರ್ ಎಂ ವಿಶ್ವೇಶ್ವರಯ್ಯ ನವರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಮ್ಮ Post ನಲ್ಲಿ ನೀಡಲಾಗಿದೆ.

ಸರ್ ಎಂ ವಿಶ್ವೇಶ್ವರಯ್ಯ

ಭಾರತ ದೇಶದ ಪವಿತ್ರ ಭೂಮಿಯಲ್ಲಿ ಜನಿಸಿದ ಪುಣ್ಯ ಪುರುಷರಲ್ಲಿ ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಮಟ್ಟದಲ್ಲಿ ಎತ್ತಿ ಹಿಡಿದ ಮಹಾನ್ ಮೇಧಾವಿ, ತಂತ್ರಜ್ಞ, ಅಮರ ವಾಸ್ತು ಶಿಲ್ಪಿ, ಅಭಿವೃದ್ಧಿಯ ಹರಿಕಾರರಾಗಿ ದೇಶಾದ್ಯಂತ ಕೈಗಾರಿಕೆ, ಅಣೆಕಟ್ಟೆ, ಬ್ಯಾಂಕಿಂಗ್‌, ಶಿಕ್ಷಣ ಹೀಗೆ ನಾನಾ ಕ್ಷೇತ್ರಗಳಲ್ಲಿ ದೇಶವನ್ನು ಪ್ರಗತಿ ಪಥದತ್ತ ಮುನ್ನಡೆಸಿದವರು.

ಸರ್ ಎಂ ವಿಶ್ವೇಶ್ವರಯ್ಯ ನವರ ಬಾಲ್ಯ

ವಿಶ್ವೇಶ್ವರಯ್ಯನವರು ಸೆಪ್ಟೆಂಬರ್ ೧೫,೧೮೬೦ ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಎಂಬಲ್ಲಿ ಜನಿಸಿದರು. ವಿಶ್ವೇಶ್ವರಯ್ಯನವರ ತಂದೆ ಶ್ರೀನಿವಾಸ ಶಾಸ್ತ್ರಿ, ತಾಯಿ ವೆಂಕಟಲಕ್ಷ್ಮಮ್ಮ. ಅವರ ಪೂರ್ವಜರು ಈಗಿನ ಆಂದ್ರಪ್ರದೇಶದ ‘ಮೋಕ್ಷಗುಂಡಂ’ ಎಂಬ ಸ್ಥಳದಿಂದ ವಲಸೆ ಬಂದು ಮುದ್ದೇನಹಳ್ಳಿಯಲ್ಲಿ ವಾಸವಾಗಿದ್ದ ಕಾರಣ ಅವರ ಹೆಸರಿನೊಡನೆ ಮೋಕ್ಷಗುಂಡಂ ಸೇರಿಕೊಂಡಿದೆ. ವಿಶ್ವೇಶ್ವರಯ್ಯ ನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ಅವರು ೧೫ ವರ್ಷದವರಿರುವಾಗಲೆ ತಂದೆಯು ನಿಧನರಾದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. ೧೮೮೧ ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಿಂದ ಬಿ.ಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು.

ವೃತ್ತಿ ಜೀವನ

ವಿಶ್ವೇಶ್ವರಯ್ಯನವರು ನಂತರ ಮುಂಬಯಿ ನಗರದಲ್ಲಿ ಲೋಕೋಪಯೋಗಿ ಇಲಾಖೆಯನ್ನು ೧೮೮೪ರಲ್ಲಿ ಸೇರಿದರು. ಇದಾದ ಮೇಲೆ ಭಾರತೀಯ ನೀರಾವರಿ ಆಯೋಗದಿಂದ ಅವರಿಗೆ ಆಮಂತ್ರಣ ಬಂದಿತು. ಈ ಆಯೋಗವನು ಸೇರಿದ ನಂತರ ದಖನ್ ಪ್ರಸ್ತಭೂಮಿಯಲ್ಲೇ ಉತ್ತಮವಾದ ನೀರಾವರಿ ವ್ಯವಸ್ಥೆಯನ್ನು ವಿಶ್ವೇಶ್ವರಯ್ಯನವರು ಪರಿಚಯಿಸಿದರು. ಸರ್ ಎಂ. ವಿ. ಯವರು ಅರ್ಥರ್ ಕಾಟನ್ ರವರಿಂದ ಬಹಳಷ್ಟು ಪ್ರಭಾವಿತರಾಗಿದ್ದರು. ಕಾವೇರಿ ನದಿಗೆ ಅಣೆಕಟ್ಟು ಕಟ್ಟುವಲ್ಲಿ ಅವರು ತಿರುಚನಾಪಳ್ಳಿಯಲ್ಲಿ ಚೋಳ ರಾಜರಿಂದ ನಿರ್ಮಿಸಲ್ಪಟ್ಟ ಹಾಗೂ ೧೮ನೇ ಶತಮಾನದ ಅರ್ಧದಲ್ಲಿ ಅರ್ಥರ್ ಕಾಟನ್ ರವರಿಂದ ಸಂಪೂರ್ಣವಾಗಿ ನವೀಕರಿಸಲ್ಪಟ್ಟ ಬೃಹತ್ ಅಣೆಕಟ್ಟು [ಗ್ರಾಂಡ್ ಅಣಿಕಟ್] ನ್ನು ನೋಡಿ ಪ್ರಭಾವಿತರಾಗಿದ್ದರು. ನಂತರ ಮಹಾರಾಜರಲ್ಲಿ ಇದನ್ನು ವರದಿ ಮಾಡಿದ್ದರು. ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ ‘ಸ್ವಯಂಚಾಲಿತ ಫ್ಲಡ್ ಗೇಟ್ ವಿನ್ಯಾಸ’ ವೂಂದನ್ನು ಕಂಡು ಹಿಡಿದು ಅದಕ್ಕಾಗಿ ‘ಪೇಟೆಂಟ್’ ಪಡೆದರು. ಮೊದಲ ಬಾರಿಗೆ ೧೯೦೩ ರಲ್ಲಿ ಈ ಫ್ಲಡ್ ಗೇಟ್ ಗಳು ಪುಣೆಯ ‘ಖಡಕ್ವಾಸ್ಲಾ’ ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ ‘ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು’ ಮತ್ತು ಕರ್ನಾಟಕದ ‘ಕೃಷ್ಣರಾಜಸಾಗರ’ ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ ಗಳ ಉದ್ದೇಶ ಅಣೆಕಟ್ಟಿಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು. ಕೃಷ್ಣರಾಜ ಸಾಗರವನ್ನು ಕಟ್ಟಿದಾಗ ಅದು ಆ ಕಾಲದಲ್ಲಿ ಭಾರತದ ಅತ್ಯಂತ ದೊಡ್ಡ ಅಣೆಕಟ್ಟು. ವಿಶ್ವೇಶ್ವರಯ್ಯನವರು ದೇಶದಾದ್ಯಂತ ಪ್ರಸಿದ್ಧರಾದದ್ದು ಹೈದರಾಬಾದ್ ನಗರವನ್ನು ಪ್ರವಾಹಗಳಿಂದ ರಕ್ಷಿಸಲು ಪ್ರವಾಹ ರಕ್ಷಣಾ ವ್ಯವಸ್ಥೆಯನ್ನು ಅವರು ಏರ್ಪಡಿಸಿದಾಗ. ಇವರ ಮುಖ್ಯ ಸೇವಕ ಪ್ರಶಾಂತ್.

ದಿವಾನರಾಗಿ ಸರ್ ಎಂ ವಿಶ್ವೇಶ್ವರಯ್ಯನವರು

೧೯೦೮ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ ಅವರ ಜೊತೆ ಮೈಸೂರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಕೆಲಸ ಮಾಡಿದರು. ೧೯೧೭ ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು (ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್). ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು.

ಸರ್ ಎಂ ವಿಶ್ವೇಶ್ವರಯ್ಯನವರ ಸಾಧನೆಗಳು

  • ಕೃಷ್ಣರಾಜಸಾಗರದ ನಿರ್ಮಾಣ.
  • ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಚೇರಮನ್ನರಾಗಿ ಅದರ ಅಭಿವೃದ್ಧಿಗೆ ಕೊಡುಗೆ.
  • ಮೈಸೂರು ಸಾಬೂನು ಕಾರ್ಖಾನೆಯ ಸ್ಥಾಪನೆ.
  • ಮೈಸೂರು ವಿಶ್ವವಿದ್ಯಾಲಯದ ಸ್ಥಾಪನೆ.
  • ಮೈಸೂರು ಬ್ಯಾಂಕ್ ಸ್ಥಾಪನೆ.
  • ಮೈಸೂರು ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಗ್ರಂಥಾಲಯಗಳ ಸ್ಥಾಪನೆ.

ಇವರ ಸಾಧನೆಗೆ ಸಿಕ್ಕ ಗೌರವಗಳು

ವಿಶ್ವೇಶ್ವರಯ್ಯನವರು ದಿವಾನರಾಗಿದ್ದಾಗ ಬ್ರಿಟೀಷ ಸರ್ಕಾರ ಅವರಿಗೆ “ಸರ್” ಪದವಿಯನ್ನು ನೀಡಿತು.
೧೯೫೫ ರಲ್ಲಿ ಭಾರತ ಸರ್ಕಾರದ ಅತ್ಯುಚ್ಚ ಗೌರವವಾದ ಭಾರತ ರತ್ನ ಲಭಿಸಿತು. ಸರ್. ಎಂ. ವಿಶ್ವೇಶ್ವರಯ್ಯನವರು ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗರು.
ಕರ್ನಾಟಕದಲ್ಲಿ ಹೆಚ್ಚಿನ ಶಾಲಾ ಕಾಲೇಜುಗಳು, ಐ.ಟಿ.ಐ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಇವರ ಹೆಸರಿಟ್ಟು ಗೌರವಿಸಲಾಗಿದೆ.
ಭಾರತ ದೇಶದಲ್ಲಿ ಮೊದಲ EDUSAT ತರಗತಿಗಳನ್ನು ಆರಂಭಿಸಿದ ಕೀರ್ತಿ ಬೆಳಗಾವಿಯಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಸಲ್ಲುತ್ತದೆ. ಇದರ ಮುಖ್ಯ ಉದ್ದೇಶ ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳಿಗೂ ಉತ್ತಮ ಶಿಕ್ಷಣ ನೀಡುವುದು. ಕರ್ನಾಟಕದಲ್ಲಿನ ಎಲ್ಲಾ ಇಂಜಿನಿಯರಿಂಗ್ ಕಾಲೇಜುಗಳು ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂಗವಾಗಿವೆ.
ಇಂಜಿನಿಯರ್ ಕ್ಷೇತ್ರದಲ್ಲಿ ಇವರು ಸಲ್ಲಿಸಿರುವ ಅಪಾರ ಸೇವೆಯ ಸ್ಮರಣೆಗಾಗಿ ಇವರ ಜನ್ಮ ದಿನವನ್ನು(ಸೆಪ್ಟೆಂಬರ್ ೧೫) ಭಾರತದಲ್ಲಿ ಪ್ರತಿವರ್ಷ ಇಂಜಿನಿಯರ್್ಸ ದಿನವಾಗಿ ಆಚರಿಸಲಾಗುತ್ತದೆ.

FAQ

ಸರ್ ಎಂ ವಿಶ್ವೇಶ್ವರಯ್ಯನವರು ಎಲ್ಲಿ ಜನಿಸಿದರು ?

ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಜನಿಸಿದರು.

ಸರ್ ಎಂ ವಿಶ್ವೇಶ್ವರಯ್ಯ ಯಾವ ಅರಸರ ಅವಧಿಯಲ್ಲಿ ದಿವಾನರಾಗಿದ್ದರು ?

ಮಹಾರಾಜ ಕೃಷ್ಣರಾಜ ಒಡೆಯರ್ ಅವರ ಅವಧಿಯಲ್ಲಿ ದಿವಾನರಾಗಿ ಸೇವೆ ಸಲ್ಲಿಸಿದರು.

ಸರ್ ಎಂ ವಿಶ್ವೇಶ್ವರಯ್ಯರವರಿಗೆ ಬ್ರಿಟಿಷರು ಸರ್ಕಾರ ಯಾವ ಪದವಿಯನ್ನು ನೀಡಿತು ?

ಸರ್‌ ಪದವಿಯನ್ನು ನೀಡಿತು.

ಇತರೆ ವಿಷಯಗಳು :

ನೆಹರು ಅವರ ಜೀವನ ಚರಿತ್ರೆ

ಶೌಚಾಲಯದ ಬಗ್ಗೆ ಪ್ರಬಂಧ