ಕಿತ್ತೂರು ರಾಣಿ ಚೆನ್ನಮ್ಮ ಬಗ್ಗೆ ಪ್ರಬಂಧ | Essay on Kittur Rani Chennamma in Kannada

ಕಿತ್ತೂರು ರಾಣಿ ಚೆನ್ನಮ್ಮ ಬಗ್ಗೆ ಪ್ರಬಂಧ, Essay on Kittur Rani Chennamma prabandha essay in kannada

ಕಿತ್ತೂರು ರಾಣಿ ಚೆನ್ನಮ್ಮ ಬಗ್ಗೆ ಪ್ರಬಂಧ

ಕಿತ್ತೂರು ರಾಣಿ ಚೆನ್ನಮ್ಮ ಬಗ್ಗೆ ಪ್ರಬಂಧ | Essay on Kittur Rani Chennamma

ಈ ಲೇಖನಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ನವರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಮ್ಮ Post ನಲ್ಲಿ ನೀಡಲಾಗಿದೆ.

Essay on Kittur Rani Chennamma in Kannada

ಪಿಠೀಕೆ

ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಡಿನ ವೀರ ವನಿತೆಯರಲ್ಲಿ ಒಬ್ಬಳು. ಕಿತ್ತೂರಿನ ಸ್ವಾತಂತ್ರಕ್ಕಾಗಿ ಬ್ರಿಟಿಷರರೊಡನೆ ಹೋರಾಡಿದ ಪ್ರಪ್ರಥಮ ವೀರ ಮಹಿಳೆ ಎಂದರೆ ಕಿತ್ತೂರ ರಾಣಿ ಚೆನ್ನಮ್ಮ. ತನ್ನ ನಾಡಿಗಾಗಿ, ತನ್ನ ಪ್ರಜೆಗಳಿಗಾಗಿ, ಬ್ರಿಟಿಷರ ವಿರುದ್ದ ಹೋರಾಡಿದರು. ಕನ್ನಡ ನಾಡಿನ ವೀರ ಮಹಿಳೆಯರಲ್ಲಿಅಗ್ರಪಂಕ್ತಿಗೆ ಸೇರಿದವರಾಗಿದ್ದಾರೆ.

ವಿಷಯ ವಿವರಣೆ

ಕಿತ್ತೂರು ರಾಣಿ ಚೆನ್ನಮ್ಮನ ಜೀವನ ಚರಿತ್ರೆ

ಕಿತ್ತೂರು ಚೆನ್ನಮ್ಮ ಅವರು 1778 ರ ನವೆಂಬರ್ 14 ರಂದು ಭಾರತದ ಕರ್ನಾಟಕದ ಪ್ರಸ್ತುತ ಬೆಳಗಾವಿ ಜಿಲ್ಲೆಯ ಕಾಕತಿ ಎಂಬ ಸಣ್ಣ ಹಳ್ಳಿಯಲ್ಲಿ ಜನಿಸಿದರು. ಲಿಂಗಾಯತ ಸಮುದಾಯಕ್ಕೆ ಸೇರಿದ ಆಕೆ ಚಿಕ್ಕಂದಿನಿಂದಲೇ ಕುದುರೆ ಸವಾರಿ, ಕತ್ತಿವರಸೆ ಮತ್ತು ಬಿಲ್ಲುಗಾರಿಕೆಯಲ್ಲಿ ತರಬೇತಿ ಪಡೆದಿದ್ದಳು. ತನ್ನ15ನೇ ವಯಸ್ಸಿನಲ್ಲಿ ಕಿತ್ತೂರಿನ ರಾಜ ಮಲ್ಲಸರ್ಜ ದೇಸಾಯಿ ಅವರನ್ನು ವಿವಾಹವಾಗಿ ಕಿತ್ತೂರಿನ ರಾಣಿಯಾದರು. ಮದುವೆಯಿಂದ ಅವರಿಗೆ ಒಬ್ಬ ಮಗನಿದ್ದನು, 1816 ರಲ್ಲಿ ತನ್ನ ಗಂಡನ ಮರಣದ ನಂತರ, (1824 ರಲ್ಲಿ ನಿಧನರಾದರು) ಕಿತ್ತೂರಿನ ರಾಣಿಯಾಗಿ, ಕಿತ್ತೂರು ಚೆನ್ನಮ್ಮ ತನ್ನ ಏಕೈಕ ಮಗನ ಮರಣದ ನಂತರ ಶಿವಲಿಂಗಪ್ಪನನ್ನು ಉತ್ತರಾಧಿಕಾರಿ ಮಾಡುವ ಉದ್ದೇಶದಿಂದ ದತ್ತು ಪಡೆದರು. ಕಿತ್ತೂರು ರಾಣಿ ಚೆನ್ನಮ್ಮ ಎಂದೂ ಕರೆಯುತ್ತಾರೆ, ಅವರು ಬ್ರಿಟಿಷರ ವಿರುದ್ಧ ಬಂಡಾಯವೆದ್ದ ಮೊದಲ ಮಹಿಳಾ ಆಡಳಿತಗಾರರಲ್ಲಿ ಒಬ್ಬರು ಎಂದು ಪ್ರಶಂಸಿಸಲ್ಪಟ್ಟಿದ್ದಾರೆ. ಮತ್ತು ಅವರ ವಿರುದ್ಧದ ಮೊದಲ ಯುದ್ಧದಲ್ಲಿ ಸೋತ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ 1824 ರ ದಂಗೆಗೆ ಪ್ರಸಿದ್ಧರಾಗಿದ್ದಾರೆ. ಈ ಸಾಧನೆಯು ಅವಳನ್ನು ಕರ್ನಾಟಕ ಸಂಸ್ಕೃತಿಯಲ್ಲಿ ಜಾನಪದ ನಾಯಕಿಯಾಗಿ ಮತ್ತು ಸ್ವಾತಂತ್ರ್ಯ ಚಳವಳಿಯ ಪ್ರಧಾನ ಸಂಕೇತವಾಗಿ ಪರಿವರ್ತಿಸಿತು.

ಬ್ರಿಟಿಷರ ವಿರುದ್ಧ ಕಿತ್ತೂರು ರಾಣಿ ಚೆನ್ನಮ್ಮನ ಹೋರಾಟ

ರಾಣಿ ಚೆನ್ನಮ್ಮ 1778ರಲ್ಲಿ ಜನಿಸಿದರು. ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ನಡೆದಿದ್ದು 1857ರಲ್ಲಿ. ಅಂದ್ರೆ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟ ನಡೆಸಿದ ಪ್ರಥಮ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಇವರು ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ 56 ವರ್ಷಗಳ ಮುಂಚೆಯೇ ಬ್ರಿಟಿಷರ ವಿರುದ್ಧ ಹೋರಾಡಿದ್ದರು.

ಕಿತ್ತೂರು ರಾಣಿ ಚೆನ್ನಮ್ಮನ ಮಾಹಿತಿಯನ್ನು ಆಳವಾಗಿ ಪರಿಶೀಲಿಸಿದರೆ, 1824 ರಲ್ಲಿ ಅವರ ಪತಿ ಮತ್ತು ಏಕೈಕ ಪುತ್ರನ ಮರಣದ ನಂತರ, ಅವರು ಬ್ರಿಟಿಷ್ ಆಳ್ವಿಕೆಯಿಂದ ಕಿತ್ತೂರು ಸಂಸ್ಥಾನದ ಏಕೈಕ ರಕ್ಷಕರಾಗಿದ್ದರು. ಕಿತ್ತೂರಿನ ಬ್ರಿಟಿಷರ ಸ್ವಾಧೀನವನ್ನು ತಪ್ಪಿಸಲು, ಅವರು ಅದೇ ವರ್ಷ ಶಿವಲಿಂಗಪ್ಪನನ್ನು ದತ್ತು ಪಡೆದರು ಮತ್ತು ಸಿಂಹಾಸನದ ಉತ್ತರಾಧಿಕಾರಿ ಎಂದು ಹೆಸರಿಸಿದರು. ಕಿತ್ತೂರಿನ ಮೇಲೆ ಬ್ರಿಟಿಷರು ಮಾಡಬಹುದಾದ ಆಕ್ರಮಣವನ್ನು ತಪ್ಪಿಸಲು ಚೆನ್ನಮ್ಮ ಥ್ಯಾಕರೆಗೆ, ಮನ್ರೋನಿಗೆ ಹಾಗು ಚಾಪ್ಲಿನ್ನನಿಗೂ ಸಹ ಸಂಧಾನಕ್ಕಾಗಿ ಪತ್ರ ಬರೆದಿದ್ದಾಳೆ. ಮುಂದಾಲೋಚನೆಯಿಂದ ಕೊಲ್ಲಾಪುರ ಮೊದಲಾದ ನೆರೆಯ ಸಂಸ್ಥಾನಗಳ ಸಹಾಯ ಕೋರಿ ಪತ್ರವ್ಯವಹಾರ ಮಾಡಿದ್ದಾಳೆ.
೨೧ ಅಕ್ಟೋಬರ್ ೧೮೨೪ರಂದು ಥ್ಯಾಕರೆ ಕಿತ್ತೂರಿಗೆ ಬಂದನು. ಮೂರನೆಯ ದಿನ ಅಂದರೆ ಅಕ್ಟೋಬರ ೨೩ರಂದು ಕೋಟೆಯ ಮೇಲೆ ತೋಪು ಹಾರಿಸಲು ತನ್ನ ಸೈನ್ಯಕ್ಕೆ ಅಪ್ಪಣೆ ಕೊಟ್ಟ. ಥಟ್ಟನೆ ತೆಗೆದ ಕೋಟೆಯ ಬಾಗಿಲಿನಿಂದ ಸಾವಿರಾರು ಜನ ಕಿತ್ತೂರು ವೀರರು ಸರದಾರ ಗುರುಸಿದ್ದಪ್ಪನವರ ಮುಂದಾಳುತನದಲ್ಲಿ ಥ್ಯಾಕರೆಯ ಸೈನ್ಯದ ಮೆಲೆ ಮುಗಿಬಿದ್ದರು. ಚೆನ್ನಮ್ಮ ರಾಣಿಯ ಅಂಗರಕ್ಷಕ ಅಮಟೂರು ಬಾಳಪ್ಪನ ಗುಂಡಿಗೆ ಥ್ಯಾಕರೆ ಬಲಿಯಾದ. ಸ್ಟೀವನ್ಸನ್ ಹಾಗು ಈಲಿಯಟ್ ಸೆರೆಯಾಳಾದರು. ಈ ವಿಜಯೋತ್ಸವವನ್ನು ಕರ್ನಾಟಕ ಸರ್ಕಾರ ಕಿತ್ತೂರು ಉತ್ಸವ ಅನ್ನುವ ಹೆಸರಿನಲ್ಲಿ ಆಚರಣೆಗೆ ಜಾರಿಗೆ ತಂದಿದೆ. ಪ್ರತಿ ವರ್ಷವೂ ಸರ್ಕಾರವೇ ಆಚರಣೆ ಮಾಡುತ್ತದೆ
ದೇಶದ್ರೋಹಿಗಳಾದ ಕನ್ನೂರು ವೀರಪ್ಪ, ಸರದಾರ ಮಲ್ಲಪ್ಪ ಅವರೂ ಬಲಿಯಾದರು. ಚೆನ್ನಮ್ಮನಿಗೆ ಹಾಗು ಬ್ರಿಟಿಷರಿಗೆ ಮತ್ತೆ ಪತ್ರವ್ಯವಹಾರ ನಡೆಯುತ್ತದೆ. ೧೮೨೪ ಡಿಸೆಂಬರ್ ೨ ರಂದು ಸ್ಟೀವನ್ಸನ್ ಹಾಗು ಈಲಿಯಟ್ ಇವರ ಬಿಡುಗಡೆಯಾಗುತ್ತದೆ. ಆದರೆ ಮಾತಿಗೆ ತಪ್ಪಿದ ಬ್ರಿಟಿಷರು ಡಿಸೆಂಬರ್ ೩ ರಂದು ಅಪಾರ ಸೈನ್ಯದೊಂದಿಗೆ ಮುತ್ತಿಗೆ ಹಾಕಿ ಕೋಟೆಯನ್ನು ಒಡೆಯಲು ಪ್ರಾರಂಭಿಸುತ್ತಾರೆ.

ಡಿಸೆಂಬರ್ ೪ ರಂದು ಸರದಾರ ಗುರುಸಿದ್ದಪ್ಪ ಸೆರೆಯಾಳಾಗುತ್ತಾನೆ. ಡಿಸೆಂಬರ್ ೫ ರಂದು ಚೆನ್ನಮ್ಮ ತನ್ನ ಸೊಸೆಯರಾದ ವೀರಮ್ಮ ಮತ್ತು ಜಾನಕಿಬಾಯಿಯರ ಜೊತೆಗೆ ಕೈದಿಯಾಗುತ್ತಾಳೆ. ಡಿಸೆಂಬರ್೧೨ ರಂದು ಚೆನ್ನಮ್ಮ ಹಾಗು ವೀರಮ್ಮರನ್ನು ಬೈಲಹೊಂಗಲಕ್ಕೆ ಒಯ್ಯಲಾಗುತ್ತದೆ. ಅಲ್ಲಿ ೪ ವರ್ಷಗಳವರೆಗೆ ಸೆರೆಯಾಳಾಗಿ ಉಳಿದ ಚೆನ್ನಮ್ಮ ೧೮೨೯ ಫೆಬ್ರುವರಿ ೨ ರಂದು ನಿಧನಹೊಂದುತ್ತಾಳೆ.
ಮುಂದೆ ಮೇ ೨೦ರಂದು ಜಾನಕಿಬಾಯಿ ನಿಧನಳಾಗುತ್ತಾಳೆ. ಆದರೆ ದೇಶ ನಿಷ್ಠರ ಹೋರಾಟ ನಿಂತಿರುವುದಿಲ್ಲ. ಕಾಳಗದಲ್ಲಿ ಸೆರೆ ಸಿಕ್ಕು ಆ ಮೇಲೆ ಬಿಡುಗಡೆಯಾದ ಸಂಗೊಳ್ಳಿ ರಾಯಣ್ಣ ೧೮೨೯ರಲ್ಲಿ ಹೋರಾಟ ಮುಂದುವರೆಸುತ್ತಾನೆ. ಇವನ ಹೋರಾಟಕ್ಕೆ ನೆರವು ನೀಡುತ್ತಿರುವ ಸಂಶಯದ ಮೇಲೆ ವೀರಮ್ಮನನ್ನು ಬ್ರಿಟಿಷರು ಮೊದಲು ಕುಸುಗಲ್ಲಿಗೆ, ಆ ಬಳಿಕ ಬೇರೊಂದು ಸ್ಥಳಕ್ಕೆ ಒಯ್ಯುತ್ತಾರೆ.
ಇತ್ತ ರಾಯಣ್ಣನ ಹೋರಾಟ ಮುಂದುವರೆದಿರುತ್ತದೆ. ವಿಶ್ವಾಸದ್ರೋಹಿಗಳು ಇವನ ಸಂಗಡಿಗರಂತೆ ನಟಿಸುತ್ತ ೧೮೩೦ ಫೆಬ್ರುವರಿಯಲ್ಲಿ ಇವನನ್ನು ಬ್ರಿಟಿಷರಿಗೆ ಹಿಡಿದುಕೊಡುತ್ತಾರೆ. ಕಂಪನಿ ಸರಕಾರ ಈ ಕಾರ್ಯಕ್ಕಾಗಿ ಲಿಂಗನಗೌಡ ಮತ್ತು ವೆಂಕನಗೌಡರಿಗೆ ೩೦೦ ರೂಪಾಯಿ ಬಹುಮಾನ ಕೊಡುತ್ತದೆ.
ಮೇ ೧೮೩೦ ರಲ್ಲಿ ದತ್ತುಪುತ್ರ ಶಿವಲಿಂಗಪ್ಪ ಹಾಗು ಇತರ ೪೦೦ ಜನರು ಬ್ರಿಟಿಷರಿಗೆ ಸ್ವಯಂ ಸೆರೆಯಾಗುತ್ತಾರೆ. ಜುಲೈ ೧೮೩೦ ರಂದು ವೀರಮ್ಮ ಸೆರೆಮನೆಯಲ್ಲಿ ಮರಣಹೊಂದುತ್ತಾಳೆ. ವಿಷ ತೆಗೆದುಕೊಂಡು ಮರಣ ಹೊಂದಿದಳೆಂದೂ, ಇಂಗ್ಲಿಷರೆ ವಿಷ ಹಾಕಿ ಕೊಂದರೆಂದೂ ಪ್ರತೀತಿ. ೧೮೩೧ ಜನೆವರಿ ೨೬ ರಂದು ಸಂಗೊಳ್ಳಿ ರಾಯಣ್ಣನನ್ನು ನಂದಗಡದಲ್ಲಿ ಗಲ್ಲಿಗೇರಿಸಲಾಗುತ್ತದೆ.

ಉಪಸಂಹಾರ

ತನ್ನ ನಾಡಿಗಾಗಿ, ತನ್ನ ಪ್ರಜೆಗಳಿಗಾಗಿ, ಬ್ರಿಟಿಷರ ವಿರುದ್ದ ಹೋರಾಡಿದ ಭಾರತದ ಮೊದಲ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ. ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಬೆಳಗುವ ಹೆಸರುಗಳಲ್ಲಿ ಕಿತ್ತೂರು ರಾಣಿ ಚನ್ನಮ್ಮಳದು ಮುಂಚೂಣಿಯಲ್ಲಿದೆ. ಆದರೆ ಅವಳು ಆಳಿದ ನೆಲ ಇಂದು ದುಸ್ಥಿತಿಯಲ್ಲಿದೆ. ಕೋಟೆ ಕುಸಿಯುತ್ತಿದೆ. ಕಿತ್ತೂರಿನ ಸಮಗ್ರ ಇತಿಹಾಸ ಸಾರುವ ಸಾಹಿತ್ಯವೂ ರಚನೆಯಾಗಿಲ್ಲ. ಹೀಗಿರುವಾಗ ಮುಂದಿನ ಪೀಳಿಗೆ ಇತಿಹಾಸದಿಂದ ಪ್ರೇರಣೆ ಪಡೆಯುವುದಾದರೂ ಹೇಗೆ? ಆದ್ದರಿಂದ ಎಲ್ಲರು ಕೂಡ ವೀರ ವನಿತೆಯರು , ಮಹನೀಯರನ್ನು ಗೌರವಿಸುತ್ತ ಅವರಿದ್ದ ನಾಡನ್ನ ನಾವು ಸ್ವಚಂದವಾಗಿ ನೋಡಿಕೊಳ್ಳುವುದಾಗಿದೆ.

FAQ

ಕಿತ್ತೂರು ರಾಣಿ ಚೆನ್ನಮ್ಮನವರು ಎಷ್ಟರಲ್ಲಿ ಜನಿಸಿದರು ?

1778 ನವೆಂಬರ್ 14 ರಂದು ಜನಿಸಿದರು.

ಕಿತ್ತೂರು ರಾಣಿ ಚೆನ್ನಮ್ಮನವರು ಎಷ್ಟರಲ್ಲಿ ಮರಣವನ್ನು ಹೊಂದುತ್ತಾರೆ ?

೧೮೨೯ ಫೆಬ್ರುವರಿ ೨ ರಂದು ಮರಣವನ್ನು ಹೊಂದುತ್ತಾಳೆ.

ಇತರೆ ಪ್ರಬಂಧಗಳು:

ರಾಷ್ಟ್ರೀಯ ಹಬ್ಬಗಳ ಬಗ್ಗೆ ಪ್ರಬಂಧ

ಸುಭಾಷ್ ಚಂದ್ರ ಬೋಸ್ ಅವರ ಬಗ್ಗೆ ಪ್ರಬಂಧ

ಕನ್ನಡ ರಾಜ್ಯೋತ್ಸವದ ಬಗ್ಗೆ ಪ್ರಬಂಧ

Leave your vote

-1 Points
Upvote Downvote

Leave a Comment

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ