ಕನಕದಾಸರ ಕೀರ್ತನೆಗಳು | Kanakadasa Keerthanegalu in Kannada

ಕನಕದಾಸರ ಕೀರ್ತನೆಗಳು Kanakadasa information in Kannada Kanakadasa Keerthanegalu in Kannada

ಕನಕದಾಸರ ಕೀರ್ತನೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಮ್ಮ Post ನಲ್ಲಿ ನೀಡಲಾಗಿದೆ.

ಕನಕದಾಸರ ಕೀರ್ತನೆಗಳು

ಕನಕದಾಸರ ಕೀರ್ತನೆಗಳು | Kanakadasa Keerthanegalu in Kannada

ಕನಕದಾಸರ ಕೀರ್ತನೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಮ್ಮ Post ನಲ್ಲಿ ನೀಡಲಾಗಿದೆ.

ಶ್ರೀ ಕನಕದಾಸರು ತಿಮ್ಮಪ್ಪ ನಾಯಕ ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ಧವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.

ಕನಕದಾಸರ ಕೀರ್ತನೆಗಳು

ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು ಅವರ ಕೀರ್ತನೆಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯನಾಗಿ, ಮಹತೋಮಹೀಮನಾಗಿ ಅವರು ಕಂಡಿದ್ದಾರೆ. ‘ಬಾ ರಂಗ ಎನ್ನ ಮನಕೆ ಎಂದು ಹೃದಯ ಸದನಕ್ಕೆ ‘ಎಂದು ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು -‘ಕಂಡೆ ನಾ ತಂಡ ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ’ ಎಂದು ಸಂತೋಷಪಟ್ಟಿದ್ದಾರೆ. ‘ಎಲ್ಲಿ ನೋಡಿದರಲ್ಲಿ ರಾಮ’ ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡ ಬಳಿಕ ‘ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು’ ಎಂಬ ಧನ್ಯತಾಭಾವ. ‘ದಾಸದಾಸರ ಮನೆಯ ದಾಸಿಯರ ಮಗ ಮಂಕುದಾಸ ಮರುಳುದಾಸ ನರಜನ್ಮಹುಳು ಪರಮಪಾಪಿ’ ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ ಹಣ್ಣಾದಂತೆ ಪರಮಾತ್ಮನ ಸಾಕ್ಷಾತ್ಕಾರವಾದಂತೆ ‘ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ’ ಎಂದುಕೊಳ್ಳುತ್ತಾರೆ.

ಜೈನ, ವೀರಶೈವರ ಕಿತ್ತಾಟ, ಮುಸಲ್ಮಾನ ಪ್ರಾಬಲ್ಯ ಇವುಗಳಿಂದ ಸೊರಗಿ ಹೋಗಿದ್ದ ವೈದಿಕ ಧರ್ಮಕ್ಕೆ ಪುನಶ್ಚೇತನ ನೀಡಲು ವ್ಯಾಸರಾಯರಂಥವರು ಶ್ರಮಿಸುತ್ತಿದ್ದ ಕಾಲವದು. ವೈದಿಕ ಸಂಸ್ಕೃತಿಯ ಉತ್ಥಾನಕ್ಕೆಂದು ಹುಟ್ಟು ಹಾಕಲಾದ ವಿಜಯನಗರ ಸಾಮ್ರಾಜ್ಯ ಕೃಷ್ಣದೇವರಾಯನ ಅಳಿವಿನ ನಂತರ ಪತನದ ಹಾದಿ ಹಿಡಿದಿತ್ತು. ಇಂಥಲ್ಲಿ ಕನಕದಾಸರಂಥವರ ಕಾವ್ಯಕೃಷಿ ಹಾಗೂ ಸಾರ್ವಜನಿಕ ಜೀವನ ವ್ಯಾಸರಾಯರಿಗೆ ಬೆಂಬಲದ ಶ್ರೀರಕ್ಷೆಯಾಗಿದ್ದವು.

‘ನಾವು ಕುರುಬರು ನಮ್ಮ ದೇವರು ಬೀರಯ್ಯ ಕಾವ ನಮ್ಮಜ್ಜ ನರಕುರಿ ಹಿಂಡುಗಳ’ ಎಂದು ವಿನೀತ ಜಾತಿ ಭಾವನೆ ತೋರಿದ್ದ ಕನಕದಾಸರು ವ್ಯಾಸರಾಯರ ಸಂಪರ್ಕದ ನಂತರ ‘ಕುಲಕುಲಕುಲವೆಂದು ಹೊಡೆದಾಡದಿರಿ’ ಎಂದು ಜಂಕಿಸಿ ಕೇಳುವ ಹಾಗಾದರು.
ಇಂಥ ನಡವಳಿಕೆಗಳಿಂದ ವೈದಿಕ ಧರ್ಮದ ಗುತ್ತಿಗೆ ತಮ್ಮದು ಎಂದು ಭಾವಿಸಿದ್ದ ಬ್ರಾಹ್ಮಣರಿಗೆ ಕನಕದಾಸರು ಬಿಸಿ ತುಪ್ಪವಾದರು. ಹಿಂದೂ ಸಮಾಜದಲ್ಲಿ ಈ ಬ್ರಾಹ್ಮಣ ಬ್ರಾಹ್ಮಣೇತರ ಕಂದರ/ಕ ದೊಡ್ಡದಾಗುತ್ತಾ ಹೋದಂತೆ ವ್ಯಾಸಪೀಠದ ಜೊತೆಗೆ ದಾಸಕೂಟದ ರಚನೆಯೂ ಆಗಬೇಕಾದಂತಹ ಅನಿವಾರ್ಯತೆ ಮೂಡಿತು. ಉಚ್ಚಕುಲದ ಮಾಧ್ವ ಬ್ರಾಹ್ಮಣರು ಶಾಸ್ತ್ರಾಧ್ಯಯನ-ತರ್ಕ-ವ್ಯಾಕರಣಾದಿ ವಿಶಿಷ್ಟ ಜ್ಞಾನಸಂಪನ್ನರಾಗಿ ಶಬ್ದ ಶಬ್ದಗಳನ್ನು ತಿಕ್ಕಿ ತೀಡಿ ನಿಷ್ಪತ್ತಿ ಹಿಡಿದು ಸಿದ್ಧಾಂತ ಪ್ರಮೇಯಗಳನ್ನು ಮಂಡಿಸುವುದೇ ಮುಂತಾದ ಪ್ರಕ್ರಿಯೆಗಳನ್ನು ವ್ಯಾಸಪೀಠದಲ್ಲಿ ನಡೆಯಿಸುತ್ತಿದ್ದರು. ಪುರಂದರದಾಸ, ಕನಕದಾಸ, ಜಗನ್ನಾಥದಾಸ ಮೊದಲಾದವರ ಪ್ರಾತಿನಿಧಿಕ ಸಂಘಟನೆಯೇ ದಾಸಕೂಟ. ಇವರೂ ಮಾಧ್ವ ಮತ ಪ್ರಮೇಯಗಳನ್ನೇ ಪಸರಿಸುತ್ತಾ ಆಚರಿಸುತ್ತಿದ್ದರಾದರೂ ಅವುಗಳನ್ನು ಅರಿಯಲು ಸಂಸ್ಕೃತ ಜ್ಞಾನದ ಅನಿವಾರ್ಯತೆಯನ್ನು ನಿರಾಕರಿಸಿ, ಜಾತಿ ಮತಗಳ ಕಟ್ಟು ಪಾಡಿಲ್ಲದ ಇವರು ಶಾಸ್ತ್ರಾಧ್ಯಯನದ ಅನಿವಾರ್ಯತೆ ಇಲ್ಲದೆ ತಮ್ಮ ಅನುಭಾವದಿಂದ ಹೊರಹೊಮ್ಮುವ ಭಕ್ತಿಭಾವನೆಗಳನ್ನು ತಮ್ಮ ತಾಯ್ನುಡಿಯಲ್ಲಿ ಹಾಡಿ ಲೋಕಪಾವನವನ್ನೂ ಆತ್ಮೋದ್ಧಾರವನ್ನೂ ಮಾಡ ಬೇಕೆನ್ನುವವರು. ಇಂಥಾ ದಾಸಕೂಟವನ್ನು ಹುಟ್ಟುಹಾಕಿ ಪೋಷಿಸಿ ಬೆಳೆಸಿದವರು ವ್ಯಾಸರಾಯರು ಹಾಗೂ ವಾದಿರಾಜರು. ಇಷ್ಟಿದ್ದರೂ ದಾಸಕೂಟ ವ್ಯಾಸಪೀಠಗಳ ನಡುವೆ ಆಗಿಂದಾಗ್ಗೆ ಘರ್ಷಣೆಗಳು ನಡೆದೇ ಇದ್ದವು. ಈ ಕುರಿತು ಕನಕ ಪುರಂದರರ ಕೀರ್ತನೆಗಳೇ ನಮಗೆ ಸೂಚ್ಯವಾಗಿ ಹೇಳುತ್ತವೆ. ಕುಲಕುಲವೆನ್ನುತಿಹರು ಕುಲವಾವುದು ಸತ್ಯ ಸುಖವುಳ್ಳ ಜನರಿಗೆ . ತೀರ್ಥವನು ಪಿಡಿದವರು ತಿರುನಾಮಧಾರಿಗಳೇ ಜನ್ಮ ಸಾರ್ಥಕವಿರದವರು ಭಾಗವತರಹುದೇ ಆವ ಕುಲವಾದರೇನು ಆವನಾದರೇನು ಆತ್ಮಭಾವವರಿತ ಮೇಲೆ . ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ ನಿರೂಪಣೆಯಲ್ಲಿ ಪರಿಣತಿ, ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು ಅವರ ಸಾಹಿತ್ಯದಲ್ಲಿ ಕಾಣಬಹುದು.

ಕನಕದಾಸರ ಪ್ರಸಿದ್ಧ ಕೀರ್ತನೆಗಳು

ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ

ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ
ನೀ ದೇಹದೊಳಗೊ, ನಿನ್ನೊಳು ದೇಹವೂ
ಬಯಲು ಆಲಯದೊಳಗೊ, ಆಲಯವು ಬಯಲೊಳಗೊ
ಬಯಲು ಆಲಯವೆರಡು ನಯನದೊಳಗೊ
ನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊ
ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ
ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊ
ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊ
ಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊ
ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ
ಕುಸುಮದೊಳು ಗಂಧವೊ, ಗಂಧದೊಳು ಕುಸುಮವೊ
ಕುಸುಮ ಗಂಧಗಳೆರಡು ಘ್ರಾಣದೊಳಗೊ
ಅಸಮಭವ ಕಾಗಿನೆಲೆಯಾದಿಕೇಶವರಾಯ
ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೆ,,,,

ಅಹುದಾದರಹುದೆನ್ನಿ, ಅಲ್ಲವಾದರಲ್ಲವೆನ್ನಿ.

ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ
ಬಹುಜನರುನೆಲೆ ತಿಳಿದು ಪೇಳಿ ಮತ್ತಿದನು.

ದೇವರಿಲ್ಲದ ಗುಡಿಯು ಪಾಳು ಬಿದ್ದಂಗಡಿಯು
ಭಾವವಿಲ್ಲದ ಭಕುತಿ ಅದು ಕುಹಕ ಯುಕುತಿ
ಹೇವವಿಲ್ಲದ ಹೆಣ್ಣು ಗಜುಗ ಬೆಳೆದಾ ಕಣ್ಣು
ಸೇವೆಯರಿಯದ ಧಣಿಯು ಕಲ್ಲಿನಾ ಖಣಿಯು.

ಧರ್ಮವಿಲ್ಲದ ಅರಸು ಮುರಿದ ಕಾಲಿನ ಹೊರಸು
ನಿರ್ಮಲಿಲ್ಲದ ಮನಸು ಅದು ಕಜ್ಜಿ ತಿನಿಸು
ಕರ್ಮವಿಲ್ಲದ ಗಂಡು ಕರಿಯ ಓನಕೆಯ ತುಂಡು
ಮರ್ಮವಿಲ್ಲದ ಮಾತು ಒಡಕು ಮಡಕೆಯ ತೂತು,,,

FAQ

ಕನಕದಾಸರು ಸುಮಾರು ಎಷ್ಟು ಕೀರ್ತನೆಗಳನ್ನು ರಚಿಸಿದ್ದಾರೆ ?

ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ.

ಕನಕದಾಸರು ಯಾವ ಶತಮಾನಗಳಲ್ಲಿ ಜನಪ್ರಿಯವಾದ ವ್ಯಕ್ತಿಯಾಗಿದ್ದಾರೆ ?

ಕನಕದಾಸರು ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ವ್ಯಕ್ತಿಯಾಗಿದ್ದಾರೆ.

ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ,,,

ಇತರೆ ವಿಷಯಗಳು :

ಕನಕದಾಸರ ಜಯಂತಿ ಭಾಷಣ

ಕನಕದಾಸರ ಜೀವನ ಚರಿತ್ರೆ

Leave a Comment