ಕನ್ನಡ ರಾಜ್ಯೋತ್ಸವದ ಬಗ್ಗೆ ಮಾಹಿತಿ | Kannada Rajyotsava Information in Kannada

ಕನ್ನಡ ರಾಜ್ಯೋತ್ಸವದ ಬಗ್ಗೆ ಮಾಹಿತಿ, Kannada karnataka Rajyotsava Information in Kannada

ಕನ್ನಡ ರಾಜ್ಯೋತ್ಸವದ ಬಗ್ಗೆ ಮಾಹಿತಿ

kannada rajyotsava information in kannada
kannada rajyotsava information in kannada

ಕನ್ನಡ ರಾಜ್ಯೋತ್ಸವದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಮ್ಮ Post ನಲ್ಲಿ ನೀಡಲಾಗಿದೆ.

ಕನ್ನಡ ರಾಜೋತ್ಸವದ ಇತಿಹಾಸ

ಕರ್ನಾಟಕದ ಹುಟ್ಟಿಗೆ ಕಾರಣರಾದ ಕನ್ನಡದ ಕುಲಪುರೋಹಿತ ಎಂದೇ ಹೆಸರಾದರು ಆಲೂರು ವೆಂಕಟರಾವ್ ಅವರು ಮೊದಲಿಗೆ ಕರ್ನಾಟಕ ಏಕೀಕರಣ ಚಳುವಳಿಯನ್ನು ಸ್ವಾತಂತ್ರ್ಯ ಪೂರ್ವವೇ 1905ರಲ್ಲಿ ಪ್ರಾರಂಭಿಸಿದರು. ನಂತರ ಭಾರತಕ್ಕೆ ಸ್ವಾತಂತ್ರ್ಯ ದೊರೆತು ಗಣರಾಜ್ಯವಾದ ನಂತರ ಭಾಷೆಗಳ ಆಧಾರದ ಮೇಲೆ 1956ರ ನವೆಂಬರ್ 1ರಂದು ರಾಜ್ಯಗಳನ್ನು ವಿಂಗಡಿಸಿದರು. ಅದರಂತೆ ಮದ್ರಾಸ್, ಮುಂಬೈ ಮತ್ತು ಹೈದರಾಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳೆಲ್ಲವೂ ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ನಂತರ ಮೈಸೂರು ರಾಜ್ಯವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಯಿತು. ಅವುಗಳೆಂದರೆ ಉತ್ತರ ಕರ್ನಾಟಕ, ಹಳೆಯ ಮೈಸೂರು ಹಾಗೂ ಮಲೆನಾಡು.೧೯೭೩ ರ ನವೆಂಬರ್‌ ೧ ಈ ಸಂದರ್ಭದಲ್ಲಿ ಇದ್ದಂತಹ ಮುಖ್ಯಮಂತ್ರಿ ದೇವರಾಜ್‌ ಅರಸು ರವರ ಅವಧಿಯಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಮರುನಾಮಕರಣ ಮಾಡಿದರು.

ಕರ್ನಾಟಕ ಎಂಬ ಹೆಸರು ಬಂದಿದ್ದು

ಕರ್ನಾಟಕ ಎಂಬ ಪದದ ಮೂಲ ಭಾಷೆ ಸಂಸ್ಕೃತ. ಸಂಸ್ಕೃತದ ಕನ್ನಡ ಎಂಬ ಪದದಿಂದ ಕರ್ನಾಟಕ ಹುಟ್ಟಿದೆ. ಕನ್ನಡಿಗರ ನಾಡು, ಕನ್ನಡ ನಾಡು ಎಂಬುದು ಇದರ ಅರ್ಥ. ಆದರೆ ಕರ್ನಾಟಕ ಎಂಬ ಪದದ ಹುಟ್ಟು ಅಥವಾ ಅರ್ಥದ ಬಗ್ಗೆ ಇನ್ನೂ ಹಲವು ಅಭಿಪ್ರಾಯಗಳೂ ಇದೆ. ಕರು+ನಾಡು= ಕರುನಾಡು ಎಂಬ ಪದವು ಕರ್ನಾಟಕವಾಯಿತು ಎನ್ನಲಾಗುತ್ತದೆ. ಕರು ಎಂದರೆ ಕಪ್ಪು, ಇದರರ್ಥ “ಕಪ್ಪು ಮಣ್ಣಿನ ನಾಡು” ಎಂದೂ ಸಹ ಹೇಳಲಾಗುತ್ತದೆ. ಹಳೆಯ ಗ್ರಂಥಗಳು ಇದನ್ನು ಕರ್ನಾಟ ಎಂಬ ಪದದಿಂದ ಪಡೆಯಲಾಗಿದೆ ಎಂದು ಸೂಚಿಸುತ್ತವೆ, ಕೆಲವು ಮೂಲಗಳು ಕರ್ನಾಟಕವನ್ನು ಎತ್ತರದ ಭೂಮಿಗೆ ಅನುವಾದಿಸುತ್ತದೆ. ಉತ್ತರ ಕರ್ನಾಟಕ ಜನತೆಯ ಮಾನ್ಯತೆಗಾಗಿ ಮೈಸೂರು ಎಂಬ ಹೆಸರಿನ ಬದಲು ಕರ್ನಾಟಕ ಎಂದು ಮರುನಾಮಕರಣವಾಯಿತು. ನಂತರ ದೀರ್ಘಾವಧಿಯ ಚರ್ಚೆಗಳ ನಂತರ ರಾಜ್ಯ ವಿಧಾನಸಭೆಯಲ್ಲೂ ಇದಕ್ಕೆ ಸರ್ವಾನುಮತದಿಂದ ಅನುಮತಿ ದೊರೆಯಿತು.

ಕನ್ನಡ ರಾಜೋತ್ಸವದ ಮಹತ್ವ

ಕನ್ನಡ ರಾಜ್ಯೋತ್ಸವವನ್ನು ವಿಶ್ವದಾದ್ಯಂತ ಕನ್ನಡಿಗರು ಆಚರಿಸುತ್ತಾರೆ. ಪ್ರತಿ ವರ್ಷ ಈ ದಿನ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಸಾಹಿತ್ಯ, ಕೃಷಿ, ಪರಿಸರ, ವೈದ್ಯಕೀಯ, ಸಂಗೀತ, ಕ್ರೀಡೆ, ಯೋಗ, ಚಲನಚಿತ್ರಗಳು, ದೂರದರ್ಶನ, ಶಿಕ್ಷಣ, ಪತ್ರಿಕೋದ್ಯಮ, ಸಮಾಜ ಸೇವೆ, ನ್ಯಾಯಾಂಗ ಸೇರಿದಂತೆ ಇತರ ಕ್ಷೇತ್ರಗಳಲ್ಲಿನ ಸಾಧಕರಿಗೆ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಅಲ್ಲದೇ ನಾಡಿಗಾಗಿ, ಕನ್ನಡಕ್ಕಾಗಿ ದುಡಿದ ಮಹನೀಯರಿಗೆ ಈ ಮಾಸದಲ್ಲಿ ರಾಜ್ಯ ಸರ್ಕಾರ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಗೌರವಿಸುವ ಮೂಲಕ, ನಾಡಿನ ಸೇವೆಯನ್ನು ಮುಂದುವರೆಸಲು ಇನ್ನಷ್ಟು ಪ್ರೇರಣೆ ನೀಡಿದಂತಾಗುತ್ತದೆ. ಕನ್ನಡ ನಾಡಿನ ಮಹತ್ವವನ್ನು ಕನ್ನಡಿಗರು ಅರಿತಾಗ ಮಾತ್ರ ಕನ್ನಡ ರಾಜ್ಯೋತ್ಸವದ ಆಚರಣೆ ಸಾರ್ಥಕವಾಗುತ್ತದೆ.

ಕನ್ನಡ ರಾಜೋತ್ಸವದ ಆಚರಣೆ

ಕನ್ನಡ ನಾಡಿನ ಮರುಹುಟ್ಟಿನ ದಿನವಾದ ನವೆಂಬರ್ 1ರಂದು ನಾಡಿನ ಸಮಸ್ತ ಜನತೆ ಯಾವುದೇ ಜಾತಿ, ಧರ್ಮ, ಪಂಥಗಳ ಬೇಧವಿಲ್ಲದೆ ಒಗ್ಗಟ್ಟಿನಿಂದ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುತ್ತಾರೆ. ಅರಿಶಿನ ಹಾಗೂ ಕುಂಕುಮದ ಸಂಕೇತ ಕರ್ನಾಟಕ ಹಳದಿ ಕೆಂಪು ಮಿಶ್ರಿತ ಧ್ವಜವನ್ನು ಸರ್ಕಾರಿ ಕಚೇರಿ, ಕಂಪನಿಗಳು, ಶಾಲಾ-ಕಾಲೇಜುಗಳಲ್ಲಿ ಹಾರಿಸುತ್ತಾ, ಕುವೆಂಪು ರಚಿತ ಜಯ ಭಾರತದ ಜನನಿಯ ತನುಜಾತೆ ನಾಡಗೀತೆ ಸೇರಿದಂತೆ ನಾಡಿನ ಹಿರಿಮೆಯನ್ನು ಬಿಂಬಿಸುವ ಗೀತೆಗಳ ಮೂಲಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಕರ್ನಾಟಕ ಸರ್ಕಾರ ನಾಡಿಗಾಗಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿಯ ಮೂಲಕ ಗೌರವಿಸುತ್ತದೆ. ಕೆಲವು ಕನ್ನಡ ಪರ ಸಂಘಟನೆಗಳು, ಸ್ವಯಂ ಸೇವಾ ಸಂಘಗಳು, ಎನ್ ಜಿ ಒಗಳು ಸಹ ಕನ್ನಡ ಮಾತೆ ಭುವನೇಶ್ವರಿಯ ಭಾವಚಿತ್ರವನ್ನಿಟ್ಟು ಮೆರವಣಿಗೆ, ಜಾಥಾ ನಡೆಸುತ್ತದೆ. ರಕ್ತದಾನ ಶಿಬಿರಗಳು, ಕನ್ನಡ ಪರ ಸ್ಪರ್ಧೆಗಳನ್ನು ಏರ್ಪಡಿಸತ್ತವೆ. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳ ಮೂಲಕ ಕನ್ನಡಕ್ಕಾಗಿ ದುಡಿದವರಿಗೆ ಗೌರವಿಸುತ್ತದೆ. ಚರ್ಚಾಸ್ಪರ್ಧೆ, ಭಾಷಣಗಳ ಮೂಲಕ ಕನ್ನಡ ಭಾಷೆಯ ಇತಿಹಾಸ, ಮೌಲ್ಯ, ಪ್ರಾಮುಖ್ಯತೆ ಸಾರುವ ಕಾರ್ಯ ಎಂದಿನಿಂದಲೂ ನಡೆಯುತ್ತಲೇ ಇದೆ.

ಉಪಸಂಹಾರ

ನಮ್ಮ ಕನ್ನಡ ರಾಜೋತ್ಸವನ್ನು ಕೇವಲ ನವೆಂಬರ್‌ ತಿಂಗಳಿಗೆ ಮಾತ್ರ ಸೀಮಿತವಾಗದೇ ನಮ್ಮ ಮನದಲ್ಲಿ ಯಾವಾಗಲು ಹಚ್ಚೆಯಂತಿರಿಸಿಕೊಳ್ಳಬೇಕು. ನಮ್ಮ ಕನ್ನಡ ಭಾಷೆಯನ್ನ ಉಳಿಸಿ ಬೆಳೆಸಿ ಹಾಗೆ ಇತರೆ ಜನರು ನಮ್ಮ ಕನ್ನಡವನ್ನ ಗೌರವಿಸುವಂತಾಗಬೇಕು. ಕನ್ನಡ ಭಾಷೆಯ ಹಿರಿಮೆಯ ಹೆಚ್ಚಿಸೋಣ. ಎಲ್ಲಾದರು ಇರು ಎಂತಾದರು ಇರು ಎಂದಿಗೂ ನೀ ಕನ್ನಡವಾಗಿರು. ಕನ್ನವೇ ಸತ್ಯ, ಕನ್ನಡವೇ ನಿತ್ಯ.

FAQ

ಕರ್ನಾಟಕ ರಾಜೋತ್ಸವ ದಿನವನ್ನು ಯಾವಾಗ ಆಚರಿಲಾಗುತ್ತದೆ ?

ನವೆಂಬರ್‌ ೧

ಕರ್ನಾಟಕ ಎಂಬ ಪದವು ಯಾವ ಭಾಷೆಯಿಂದ ಬಂದಿದೆ?

ಸಂಸೃತ

ಇತರೆ ಪ್ರಬಂಧಗಳು:

ಕನ್ನಡ ರಾಜ್ಯೋತ್ಸವದ ಬಗ್ಗೆ ಪ್ರಬಂಧ

ಕನ್ನಡ ರಾಜ್ಯೋತ್ಸವದ ಭಾಷಣ

Leave a Comment