ಡಿಸೆಂಬರ್ ಅಂತ್ಯಕ್ಕೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಿಶ್ಚಿತಾರ್ಥ ನಡೆಯಲಿದೆ ಎನ್ನಲಾಗಿದೆ. ಅದಕ್ಕೂ ಮೊದಲು ಶಾಪಿಂಗ್ಗಾಗಿ ದುಬೈಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

ಕನ್ನಡದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾದ ಅದಿತಿ ಪ್ರಭುದೇವ ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ವಿವಾಹವಾದರು. ನಂತರ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಮಾಡೆಲ್ ಅವಿವಾ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದೆಲ್ಲದರ ನಡುವೆ ನಟಿ ಹರಿಪ್ರಿಯಾ ಮೂಗು ಚುಚ್ಚಿಕೊಂಡು ಸುದ್ದಿಯಾಗಿದ್ದರು. ಈ ಬಗ್ಗೆ ನಟಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿದ ಅಭಿಮಾನಿಗಳು ನಟ ವಸಿಷ್ಠ ಸಿಂಹ ಅವರ ಉಪಸ್ಥಿತಿಯನ್ನು ಕಂಡುಹಿಡಿದರು. ನಂತರ ಇವರಿಬ್ಬರೂ ಮದುವೆಯಾಗಲಿದ್ದಾರೆ ಎನ್ನಲಾಗಿತ್ತು.
ನಿಶ್ಚಿತಾರ್ಥದ ಬಗ್ಗೆಯಾಗಲೀ, ಮದುವೆ ಬಗ್ಗೆಯಾಗಲೀ ಇವರಿಬ್ಬರು ತುಟಿಕ್ ಪಿಟಿಕ್ ಅಂದಿಲ್ಲ. ಇವರಿಬ್ಬರು ಬೇಗ ಇಬ್ಬರು ಮದುವೆ ಆಗಲಿದ್ದು, ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಇಬ್ಬರ ಕಡೆಯಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ. ಆದರೆ ಇಂದು ನಿಶ್ಚಿತಾರ್ಥ ನಡೆದಿದೆ ಎಂದು ಮೂಲಗಳು ಹೇಳುತ್ತಿವೆ. ಹರಿಪ್ರಿಯಾ ಮನೆಯಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ. ಇದರಲ್ಲಿ ಕೆಲವೇ ಕೆಲವರು ಭಾಗಿಯಾಗಿದ್ದಾರೆ.
ಹರಿಪ್ರಿಯಾ ಅವರ ನಿವಾಸದಲ್ಲಿ ಸಿಂಪಲ್ ಆಗಿ ಈ ಶುಭಕಾರ್ಯ ನಡೆದಿದೆ. ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಳ್ಳಲಾಗಿದೆ. ಶೀಘ್ರದಲ್ಲೇ ಹರಿಪ್ರಿಯಾ-ವಸಿಷ್ಠ ಸಿಂಹ ಸಪ್ತಪದಿ ತುಳಿಯಲಿದ್ದಾರೆ.

ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿತು ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ. ಎಂಗೇಜ್ಮೆಂಟ್ ಸಲುವಾಗಿಯೇ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಇತ್ತೀಚಿಗೆ ಶಾಪಿಂಗ್ ಮಾಡಿದ್ದರು ಎಂಬ ಮಾಹಿತಿ ಕೇಳಿಬಂದಿತ್ತು. ಈಗ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
2007ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಹರಿಪ್ರಿಯಾ ಅವರು ಇಂದಿಗೂ ಚಾರ್ಮ್ ಉಳಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಶ್ರೀಮುರಳಿ ಮುಂತಾದ ಸ್ಟಾರ್ ಹೀರೋಗಳ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ನಾಯಕಿ ಪ್ರಧಾನ ಸಿನಿಮಾಗಳನ್ನೂ ಮಾಡಿ ಸೈ ಎನಿಸಿಕೊಂಡಿದ್ದಾರೆ. ಸದ್ಯ ಹಲವು ಚಿತ್ರಗಳು ಅವರ ಕೈಯಲ್ಲಿವೆ. ವಸಿಷ್ಠ ಸಿಂಹ ಕೂಡ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.
ಇಷ್ಟು ವರ್ಷಗಳ ಕಾಲ ಅವರು ಮೂಗು ಚುಚ್ಚಿಸಿಕೊಂಡಿರಲಿಲ್ಲ. ಆದರೆ ಇತ್ತೀಚೆಗೆ ಮೂಗು ಚುಚ್ಚಲಾಯಿತು. ಆ ವಿಡಿಯೋ ನೋಡಿದ ಬಳಿಕ ಅನೇಕ ಅಭಿಮಾನಿಗಳಿಗೆ ಮದುವೆ ಬಗ್ಗೆ ಗುಮಾನಿ ಮೂಡಿತು. ‘ಇದು ಮದುವೆಯ ತಯಾರಿ’ ಎಂದು ಹಲವರು ಕಮೆಂಟ್ ಮಾಡಿದ್ದರು.
ಸ್ಯಾಂಡಲ್ವುಡ್ ಕ್ಯೂಟ್ ನಟಿಯರೆಲ್ಲ ಮದುವೆಯಾಗುತ್ತಿದ್ದಾರೆ. ಇದೀಗ ಹರಿಪ್ರಿಯಾ ಅವರೂ ಬೇಗ ಮದುವೆಯಾಗ್ತಾರೆ ಎನ್ನುವ ಹಿಂಟ್ ಒಂದು ಸಿಕ್ಕಿದೆ.
ಇತರ ವಿಷಯಗಳು :